alex Certify
ಕನ್ನಡ ದುನಿಯಾ       Mobile App
       

Kannada Duniya

ಅಹೋರಾತ್ರಿ ಧರಣಿಗೆ ಮುಂದಾದ ಪ್ರತಿಪಕ್ಷಗಳು

ganapathi jj 13

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ, ಮಂಗಳೂರು ಡಿ.ವೈ.ಎಸ್.ಪಿ. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದ್ದು, ಇದನ್ನು ವಿರೋಧಿಸಿ ಪ್ರತಿಪಕ್ಷಗಳು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲು ಮುಂದಾಗಿವೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಜೆ.ಡಿ,ಎಸ್. ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ವಿಳಂಬ ನೀತಿ ಅನುಸರಿಸಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ನ್ಯಾಯಾಂಗ ತನಿಖೆಗೆ ವಹಿಸುವ ಮೂಲಕ ಆರೋಪಿತರನ್ನು ರಕ್ಷಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಜೆ.ಡಿ.ಎಸ್. ಹಾಗೂ ಬಿ.ಜೆ.ಪಿ. ಜಂಟಿಯಾಗಿ ಹೋರಾಟ ನಡೆಸಲಿವೆ ಎಂದು ತಿಳಿಸಿದ್ದಾರೆ.

ಸರ್ಕಾರ ಪ್ರಕರಣವನ್ನು ಸಿ.ಬಿ.ಐ.ಗೆ ವಹಿಸಬೇಕು. ಹೆಸರಿಸಲಾಗಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಪ್ರತಿಪಕ್ಷಗಳು ಅಹೋರಾತ್ರಿ ಧರಣಿ ನಡೆಸಲಾಗುವುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...