alex Certify
ಕನ್ನಡ ದುನಿಯಾ       Mobile App
       

Kannada Duniya

ಕಣ್ಣೀರಿಟ್ಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ

bsy m2 nm

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನ್ಯಾಯಾಲಯದಲ್ಲಿಯೇ ಕಣ್ಣೀರಿಟ್ಟ ಘಟನೆ ನಡೆದಿದೆ. ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಅವರು ಸಿಬಿಐ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದರು.

ಪ್ರೇರಣಾ ಟ್ರಸ್ಟ್ ಗೆ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ಗೆ ವಿಚಾರಣೆಗಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರಿಗೆ ಸುಮಾರು 473 ಪ್ರಶ್ನೆಗಳನ್ನು ಕೇಳಲಾಗಿದ್ದು, ಕೆಲವು ಪ್ರಶ್ನೆಗಳಿಗೆ ಅವರು, ಬಹುಶಃ ಇರಬಹುದು, ಗೊತ್ತಿಲ್ಲ, ಸುಳ್ಳು, ನಿಜ ಎಂದಷ್ಟೇ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಕೊನೆಯಲ್ಲಿ ನ್ಯಾಯಾಧೀಶರು ನೀವೇನಾದರೂ ಹೇಳುವುದಿದೆಯಾ ಎಂದು ಪ್ರಶ್ನಿಸಿದ್ದಾರೆ.

ಆಗ ಯಡಿಯೂರಪ್ಪ, ಗದ್ಗದಿತರಾಗಿ ಕಣ್ಣೀರಿಟ್ಟಿದ್ದು, ನಾನು ಕಾನೂನು ಬಾಹಿರವಾಗಿ ಯಾರಿಗೂ ಸಹಾಯ ಮಾಡಿಲ್ಲ. ಬೊಕ್ಕಸಕ್ಕೆ ನಷ್ಟ ಉಂಟು ಮಾಡುವ ಕೃತ್ಯ ಎಸಗಿಲ್ಲ ಎಂದು ಹೇಳಿದ್ದಾರೆ. ನನ್ನ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಎಂದು ಕಣ್ಣೀರಿಟ್ಟಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...