alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಿನಲ್ಲಿ ಬಂದು ಸರ ಎಗರಿಸಿದ ಕಳ್ಳರು

ಸರಗಳ್ಳರು ಇದುವರೆಗೂ ಬೈಕ್ ನಲ್ಲಿ ಬಂದು ಒಂಟಿ ಮಹಿಳೆಯರ ಸರ ಕದ್ದು ಪರಾರಿಯಾಗುತ್ತಿದ್ದ ಘಟನೆ ಮಧ್ಯೆ ಕಾರಿನಲ್ಲಿ ಬಂದ ಇಬ್ಬರು ವೃದ್ಧೆಯೊಬ್ಬರ ಸರಗಳವು ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

ಹಂಪಿ ನಗರದ 11ನೇ ಮುಖ್ಯ ರಸ್ತೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ವಾಕಿಂಗ್ ಗೆ ತೆರಳಿದ್ದ ಚಂದ್ರಾ ಎಂಬವರ ಐವತ್ತು ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.

ಬಿಳಿ ಬಣ್ಣದ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು, ಚಂದ್ರಾ ಅವರ ಸರ ಕಸಿದುಕೊಂಡು ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...