alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರನ ಕಾರು ಅಪಘಾತ

ಕೆಲ ದಿನಗಳ ಹಿಂದಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರಿನಲ್ಲಿ ಅಪಘಾತಕ್ಕೀಡಾಗಿದ್ದು, ಈ ಅಪಘಾತದಲ್ಲಿ ದರ್ಶನ್ ಅವರ ಕೈ ಮುರಿತಕ್ಕೊಳಗಾಗಿತ್ತಲ್ಲದೇ ಕಾರಿನಲ್ಲಿದ್ದ ಹಿರಿಯ ನಟ ದೇವರಾಜ್ ಹಾಗೂ ಅವರ ಪುತ್ರ ಪ್ರಜ್ವಲ್ ದೇವರಾಜ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು.

ಈಗ ದರ್ಶನ್ ಅವರ ಸಹೋದರ, ಚಿತ್ರ ನಿರ್ದೇಶಕ ದಿನಕರ್ ತೂಗುದೀಪ ಅವರ ಕಾರು ಯಲಹಂಕದ ಬಳಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದ್ದು, ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಏಕಾಏಕಿ ನುಗ್ಗಿದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ.

ಇದರಿಂದಾಗಿ ಎರಡೂ ವಾಹನಗಳಿಗೆ ಕೊಂಚ ಮಟ್ಟಿಗೆ ಜಖಂ ಆಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ದಿನಕರ್ ತೂಗುದೀಪ ತಮ್ಮ ಸ್ನೇಹಿತರು ನಿರ್ಮಿಸುತ್ತಿರುವ ಚಿತ್ರ ಒಂದರ ಮುಹೂರ್ತ ಸಮಾರಂಭಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...