alex Certify
ಕನ್ನಡ ದುನಿಯಾ       Mobile App
       

Kannada Duniya

ಅಡಿಯೋ ಸಂದೇಶದಲ್ಲಿ ಅಭಿಮಾನಿಗಳಿಗೆ ನಟ ದರ್ಶನ್ ಹೇಳಿದ್ದೇನು?

ಮೈಸೂರು: ಮೈಸೂರಿನಲ್ಲಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈ ಮೂಳೆ ಮುರಿದು ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್, ಸ್ವತಃ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದು, ನಿಮ್ಮ ದರ್ಶನ್ ಗೆ ಏನೂ ಆಗಿಲ್ಲ. ಡಿಸ್ಚಾರ್ಜ್ ಆದ ಬಳಿಕ ನಾನೇ ಬಂದು ನಿಮ್ಮನ್ನು ಕಾಣುತ್ತೇನೆ ಎಂದು ತಿಳಿಸಿದ್ದಾರೆ.

ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಾಟ್ಸಾಪ್ ಆಡಿಯೋ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದು, ನನಗೆ ಏನೂ ಆಗಿಲ್ಲ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ. ಆರಾಮವಾಗಿರಿ. ಇನ್ನು ಒಂದು ದಿನ ಆಸ್ಪತ್ರೆಯಲ್ಲಿದ್ದು, ನಾಳೆ ಬರುತ್ತೇನೆ. ಆ ಬಳಿಕ ಎಲ್ಲರಿಗೂ ಸಿಗುತ್ತೇನೆ ಎಂದು ಹೇಳಿದ್ದಾರೆ.

ದಯವಿಟ್ಟು ಯಾರೂ ಆಸ್ಪತ್ರೆಯತ್ತ ಬರಬೇಡಿ. ಕಾರಣ ಬೇರೆ ರೋಗಿಗಳು ಆಸ್ಪತ್ರೆಯಲ್ಲಿರುವುದರಿಂದ ಅವರಿಗೆ ತೊಂದರೆಯಾಗುವ ಸಾಧ್ಯತೆಗಳಿರುವುದರಿಂದ ಆಸ್ಪತ್ರೆ ಬಳಿ ಯಾರೂ ಬರಬೇಡಿ ಎಂದು ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...