alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಗೆ ಒಪ್ಪದ ಪೋಷಕರು, ದುಡುಕಿದ ಯುವತಿ

ಚಾಮರಾಜನಗರ: ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಪೋಷಕರು ಒಪ್ಪದ ಕಾರಣ, ಯುವತಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ 22 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಯುವಕನೊಬ್ಬನನ್ನು ಪ್ರೀತಿಸಿದ್ದ ಯುವತಿ, ಆತನೊಂದಿಗೆ ಮದುವೆಯಾಗುವುದಾಗಿ ಮನೆಯವರಿಗೆ ತಿಳಿಸಿದ್ದಳೆನ್ನಲಾಗಿದೆ.

ಆದರೆ, ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಕೊಡಲು ಪೋಷಕರು ಒಪ್ಪದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೊಳ್ಳೆಗಾಲ ಗ್ರಾಮಾಂತರ ಠಾಣೆ ಪೊಲೀಸರು ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...