alex Certify
ಕನ್ನಡ ದುನಿಯಾ       Mobile App
       

Kannada Duniya

ರಥಕ್ಕೆ ಬೆಂಕಿ : ಚಾಮರಾಜನಗರ ಬಂದ್ ಗೆ ಕರೆ

chamaraj

ಚಾಮರಾಜನಗರ: ಇಲ್ಲಿನ ಶ್ರೀ ಚಾಮರಾಜೇಶ್ವರ ರಥಕ್ಕೆ ಕಿಡಿಗೇಡಿಗಳು ಬೆಂಕಿಹಚ್ಚಿದ್ದು, ಭಕ್ತ ಮಂಡಳಿ ಆಕ್ರೋಶ ವ್ಯಕ್ತಪಡಿಸಿದೆ.

ದೇವಾಲಯದ ಆವರಣದಲ್ಲಿ ಸಭೆ ಸೇರಿದ್ದ ಭಕ್ತ ಮಂಡಳಿ, ನಾಳೆ ಚಾಮರಾಜನಗರ ಬಂದ್ ಗೆ ಕರೆ ನೀಡಿದೆ.

ರಥಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ಸರ್ಕಾರದ ವತಿಯಿಂದ ನೂತನ ರಥ ನಿರ್ಮಿಸಿಕೊಡಬೇಕು ಎಂದು ಭಕ್ತ ಮಂಡಳಿಯ ಪ್ರಮುಖರು ಒತ್ತಾಯಿಸಿದ್ದಾರೆ.

ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರ ವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಶ್ರೀ ಚಾಮರಾಜೇಶ್ವರ ರಥಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ದೇವಾಲಯ ಸಮೀಪದಲ್ಲಿ ಅಳವಡಿಸಲಾಗಿದ್ದ ಸಿ.ಸಿ. ಟಿ.ವಿ. ಕ್ಯಾಮೆರಾದಲ್ಲಿ ದುಷ್ಕರ್ಮಿಗಳ ಕೃತ್ಯ ಸೆರೆಯಾಗಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...