alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಯನ್ನೇ ಕೊಂದ ಪತಿ, ಕಾರಣ ಗೊತ್ತಾ..?

chamrajngr

ಚಾಮರಾಜನಗರ: ಕಾಫಿ ಸರಿಯಾಗಿ ಮಾಡಿಲ್ಲವೆಂದು ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಚಾಮರಾಜನಗರ ಜಿಲ್ಲೆಯ ಕೆಲಂಬಳ್ಳಿಯಲ್ಲಿ ನಿವಾಸಿಯಾಗಿರುವ ಪತಿ ಕೆಟ್ಟು ಹೋಗಿದ್ದ ಹಾಲಿನಲ್ಲಿ ಕಾಫಿ ಮಾಡಿದ ಕಾರಣಕ್ಕೆ ಪತ್ನಿಯ ಕೆನ್ನೆಗೆ ಹೊಡೆದಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬಳಿಕ ಯಾರಿಗೂ ಅನುಮಾನ ಬಾರದಂತೆ ಪತ್ನಿಯ ಶವವನ್ನು ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಕಟ್ಟಿದ್ದಾನೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.

ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪತಿಯನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...