alex Certify
ಕನ್ನಡ ದುನಿಯಾ       Mobile App
       

Kannada Duniya

ಸುಪ್ರೀಂ ಕೋರ್ಟ್ ತೀರ್ಪಿಗೆ ಕೆಂಡವಾದ ಕನ್ನಡಿಗರು

800x480_IMAGE57710225

ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಸೆಪ್ಟೆಂಬರ್ 20ರವರೆಗೆ ಪ್ರತಿದಿನ 12 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶ ನೀಡಿದೆ. ಇದು ಕರ್ನಾಟಕ ಜನರನ್ನು ಕೆರಳಿಸಿದೆ. ಬೆಂಗಳೂರಿನಲ್ಲಿ ಪ್ರತಿಭಟನಾಕಾರರು ರೊಚ್ಚಿಗೆದ್ದಿದ್ದಾರೆ.

ಇಡೀ ರಾಜ್ಯ ಹೊತ್ತಿ ಉರಿಯುತ್ತಿದೆ. ಕಾವೇರಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಬೆಂಗಳೂರಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೆಟ್ರೋ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಸೆಟಲೈಟ್ ಬಸ್ ನಿಲ್ದಾಣದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.  ಬೆಂಗಳೂರಿನಲ್ಲಿ ಅಘೋಷಿತ ಬಂದ್ ನಡೆಸಲಾಗ್ತಾ ಇದೆ. ಸ್ವಯಂ ಘೋಷಿತವಾಗಿ ಅಂಗಡಿಗಳನ್ನು ಮುಚ್ಚಲಾಗ್ತಾ ಇದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರಿಗೂ ಲಾಠಿ ರುಚಿ ತೋರಿಸಲಾಗಿದೆ. ಬೆಂಗಳೂರಿನ ಖಾಸಗಿ ಶಾಲಾ –ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...