alex Certify
ಕನ್ನಡ ದುನಿಯಾ       Mobile App
       

Kannada Duniya

ಚಾರ್ಮಾಡಿ ಘಾಟಿಯಲ್ಲಿ ಸಿಲುಕಿಕೊಂಡವರಿಗೆ ಸಿಕ್ತು ನೆಮ್ಮದಿಯ ಸುದ್ದಿ

ಗುಡ್ಡ ಕುಸಿತದ ಕಾರಣ ಚಾರ್ಮಾಡಿ ಘಾಟಿಯಲ್ಲಿ ಸ್ಥಗಿತಗೊಂಡಿದ್ದ ವಾಹನ ಸಂಚಾರ ಈಗ ಆರಂಭಗೊಂಡಿದ್ದು, ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ನಿನ್ನೆ ಸಂಜೆಯಿಂದಲೇ ಚಾರ್ಮಾಡಿ ಘಾಟಿಯಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದ ನೂರಾರು ಪ್ರಯಾಣಿಕರು ಈಗ ನೆಮ್ಮದಿಯ ನಿಟ್ಟುಸಿರುಬಿಟ್ಟಿದ್ದು, ಮೊದಲಿಗೆ ಒಂದು ಬದಿಯ ವಾಹನಗಳನ್ನು ಕ್ಲಿಯರ್ ಮಾಡುವ ಉದ್ದೇಶದಿಂದ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿ ಅಣ್ಣಾಮಲೈ ಸ್ವತಃ ಚಾರ್ಮಾಡಿ ಘಾಟಿಯಲ್ಲಿ ಉಸ್ತುವಾರಿಗೆ ನಿಂತಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುತ್ತಿದ್ದಾರೆ.

ಈ ಮಧ್ಯೆ ರಾಜಸ್ಥಾನ ಮೂಲದ ಪ್ರವಾಸಿಗರೊಬ್ಬರು ಅಸ್ವಸ್ಥಗೊಂಡಿದ್ದಾರೆನ್ನಲಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಕಾರ್ಯ ಕೈಗೊಳ್ಳಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...