alex Certify
ಕನ್ನಡ ದುನಿಯಾ       Mobile App
       

Kannada Duniya

ಚಾರ್ಮಾಡಿ ಘಾಟ್ ಮೂಲಕ ಪ್ರಯಾಣಿಸುವವರಿಗೊಂದು ಮುಖ್ಯ ಮಾಹಿತಿ

ಚಾರ್ಮಾಡಿ ಘಾಟ್ ಮೂಲಕ ಪ್ರಯಾಣಿಸಲು ನೀವು ಮುಂದಾಗಿದ್ದರೆ ಈ ಸುದ್ದಿಯನ್ನು ತಪ್ಪದೇ ಓದಿ. ಭಾರಿ ಮಳೆಯ ಕಾರಣ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರ ಬಂದ್ ಆಗಿದೆ.

ನಿನ್ನೆ ಸಂಜೆ ಈ ಗುಡ್ಡ ಕುಸಿತ ಸಂಭವಿಸಿದ್ದು, ಈ ಕಾರಣಕ್ಕೆ ನೂರಾರು ಮಂದಿ ತಮ್ಮ ವಾಹನ ಸಮೇತ ಕಳೆದ 16 ಗಂಟೆಗಳಿಂದ ಅಲ್ಲಿಯೇ ಕಾಲ ಕಳೆಯುವಂತಾಗಿದೆ. ಅದರಲ್ಲೂ ವಯಸ್ಸಾದವರು ಹಾಗೂ ಮಕ್ಕಳು ಆಹಾರವಿಲ್ಲದೆ ಪರಿತಪಿಸುವಂತಾಗಿದೆ. ಎರಡನೇ ಶನಿವಾರ ಹಾಗೂ ಭಾನುವಾರ ರಜೆಯಿದ್ದ ಕಾರಣ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.

ಘಾಟ್ ನಲ್ಲಿ ಸಿಲುಕಿಬಿದ್ದವರ ನೆರವಿಗೆ ಸ್ಥಳೀಯರು ಧಾವಿಸಿದ್ದು, ಬ್ರೆಡ್, ಹಾಲು ಹಾಗೂ ಬಿಸ್ಕೇಟ್ ಪೂರೈಸಿದ್ದಾರೆ. ಚಾರ್ಮಾಡಿ ಘಾಟ್ ಮೂಲಕ ಪ್ರಯಾಣಿಸಲು ಮುಂದಾದವರಿಗೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ. ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವುಗೊಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...