alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡ ರಾಜ್ಯೋತ್ಸವಕ್ಕೂ ಮುನ್ನವೇ ಕನ್ನಡಿಗರಿಗೆ ಸಿಹಿ ಸುದ್ದಿ

ಕನ್ನಡ ರಾಜ್ಯೋತ್ಸವ ಆಚರಣೆಗೆ ಇನ್ನೊಂದು ದಿನವಷ್ಟೇ ಬಾಕಿಯಿದೆ. ನವೆಂಬರ್ 1ರ ನಾಳೆ ಕನ್ನಡಿಗರ ಉತ್ಸವ ಆಚರಿಸಲಾಗುತ್ತಿದ್ದು, ಇದಕ್ಕೂ ಮುನ್ನವೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೀಡಿರುವ ಮಹತ್ವದ ಸೂಚನೆಯೊಂದು ಕನ್ನಡಿಗರಲ್ಲಿ ಖುಷಿ ತಂದಿದೆ.

ಆಡಳಿತದಲ್ಲಿ ಸಂಪೂರ್ಣವಾಗಿ ಕನ್ನಡ ಜಾರಿಯಾಗಬೇಕೆಂದು ಬಹು ಕಾಲದಿಂದ ಬೇಡಿಕೆ ಕೇಳಿ ಬರುತ್ತಿದ್ದರೂ ಕೆಲ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಸರ್ಕಾರದ ಕಡತಗಳು ಇಂಗ್ಲೀಷಿನಲ್ಲಿ ಇರುತ್ತಿದ್ದವು.

ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿವರು, ನವೆಂಬರ್ 1ರಿಂದ ಎಲ್ಲ ಇಲಾಖೆಗಳ ಕಡತಗಳು ಕಡ್ಡಾಯವಾಗಿ ಕನ್ನಡದಲ್ಲೇ ಇರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಜೊತೆಗೆ ಕಡತಗಳು ಕನ್ನಡದಲ್ಲಿರದಿದ್ದರೆ ಸಹಿಯೇ ಮಾಡುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಈ ಆದೇಶ ಇನ್ನು ಮುಂದೆ ಸಮರ್ಪಕವಾಗಿ ಜಾರಿಗೆ ಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...