alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಕುರ್ಚಿ ಮೇಲೆ ಮತ್ತೊಬ್ಬರ ಕಣ್ಣು…!

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ತಮ್ಮ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವವರೊಬ್ಬರು ಕೋರ್ಟ್ ಮೆಟ್ಟಿಲೇರಿರುವ ಅಚ್ಚರಿಯ ಸಂಗತಿ ಬಹಿರಂಗವಾಗಿದೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹರಿಶ್ಚಂದ್ರ ಗೌಡ ಎಂಬವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ತಮ್ಮನ್ನು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ರಾಜ್ಯಪಾಲ ವಜುಭಾಯ್ ವಾಲಾ ಆಹ್ವಾನಿಸದ ಕಾರಣಗಳ ವಿವರ ಪಡೆದು ನ್ಯಾಯ ಒದಗಿಸುವಂತೆ ಕೋರಿದ್ದಾರೆ.

ತಮಗೆ ಕಾಂಗ್ರೆಸ್ ಬೆಂಬಲವಿದೆ ಎಂದು ಹೇಳಿಕೊಂಡಿರುವ ಹರಿಶ್ಚಂದ್ರ ಗೌಡ, ಒಂದು ವೇಳೆ ರಾಜ್ಯಪಾಲರು ಸರ್ಕಾರ ರಚಿಸಲು ಕಾಂಗ್ರೆಸ್ ಗೆ ಆಹ್ವಾನ ನೀಡಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿದ್ದೆ ಎಂದಿದ್ದಾರೆ. ಈ ಪ್ರಕರಣದ ವಿಚಾರಣೆ ಜುಲೈ 6 ರಂದು ನಡೆಯುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...