alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ವಿವಾದಕ್ಕೆ ಕಾರಣವಾಗುತ್ತಾ ಸಿಎಂ ನೀಡಿರುವ ಈ ಹೇಳಿಕೆ?

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಸ್ಥಾನಮಾನ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೀಡಿದ್ದ ಒಂದು ಹೇಳಿಕೆ ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು. ಇದರಿಂದಾಗಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿತ್ತಾದರೂ ಬಳಿಕ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿಯವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಹಿಂಪಡೆಯಲಾಗಿತ್ತು.

ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳೊಂದಿಗಿನ ಸಭೆ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೀಡಿರುವ ಭರವಸೆಯೊಂದು ಈಗ ಮತ್ತೊಂದು ವಿವಾದ ಸೃಷ್ಟಿಸುವ ಸಾಧ್ಯತೆ ಕಾಣಿಸುತ್ತಿದೆ.

ತಾವು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಮಾಡುವ ಪ್ರಸ್ತಾಪವನ್ನಿರಿಸಿದ್ದು, ಅದಕ್ಕೆ ಈಗಲೂ ಬದ್ಧವಾಗಿರುವುದಾಗಿ ಕುಮಾರಸ್ವಾಮಿಯವರು ತಿಳಿಸಿದ್ದರು.

ಈಗ ಹೈದರಾಬಾದ್ ಕರ್ನಾಟಕದ ಜನತೆ ಕಲಬುರ್ಗಿಯನ್ನು ರಾಜಧಾನಿಯನ್ನಾಗಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟಿದ್ದಾರೆ. ಹೈದರಾಬಾದ್ ಕರ್ನಾಟಕ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಅಧಿಕಾರ ವಿಕೇಂದ್ರೀಕರಣಕ್ಕಾಗಿ ಕಲಬುರ್ಗಿಯನ್ನು ರಾಜಧಾನಿಯನ್ನಾಗಿ ಮಾಡುವಂತೆ ಹೈದರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್, ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದೆ.

ಬೆಳಗಾವಿ ಅಥವಾ ಕಲಬುರ್ಗಿ ಪೈಕಿ ಯಾವುದೇ ಒಂದನ್ನು ಎರಡನೇ ರಾಜಧಾನಿಯನ್ನಾಗಿ ಮಾಡಿದರೆ ಮತ್ತೆ ವಿವಾದ ಉಂಟಾಗುವ ಸಾಧ್ಯತೆ ಇದ್ದು, ಇದನ್ನು ಮುಖ್ಯಮಂತ್ರಿಗಳು ಯಾವ ರೀತಿ ನಿಭಾಯಿಸುತ್ತಾರೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...