alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿಗಳಿಗೆ ಶಾಕಿಂಗ್ ಮಾಹಿತಿ ಕೊಟ್ಟ ಗುಪ್ತಚರ ಇಲಾಖೆ, ಏನದು ಗೊತ್ತಾ?

ಮುಖ್ಯಮಂತ್ರಿಗಳಿಗೆ ಗುಪ್ತಚರ ಇಲಾಖೆ ಪ್ರಮುಖ ಮಾಹಿತಿಯೊಂದನ್ನು ನೀಡಿದೆ ಎನ್ನಲಾಗಿದ್ದು, ಪ್ರಸಕ್ತ ರಾಜಕೀಯ ಪರಿಸ್ಥಿತಿ ಹಿನ್ನಲೆಯಲ್ಲಿ ಕುಮಾರಸ್ವಾಮಿಯವರ ಸ್ಥಾನಕ್ಕೆ ಕಂಟಕ ಒದಗಿ ಬರುವ ಸಾಧ್ಯತೆಯಿದೆ ಎಂಬ ಎಚ್ಚರಿಕೆ ನೀಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.

ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದ್ದರೂ ಬಹುಮತ ಸಾಬೀತುಪಡಿಸಲು ಸಾಧ್ಯವಾಗದ ಕಾರಣಕ್ಕೆ ವಿಶ್ವಾಸ ಮತಯಾಚನೆಗೂ ಮುನ್ನವೇ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸರ್ಕಾರ ರಚನೆಯಾಗಿ ವಾರ ಕಳೆಯುತ್ತಾ ಬಂದರೂ ಸಚಿವ ಸಂಪುಟ ರಚನೆಯಾಗಿಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಹಾಗೂ ಪ್ರಮುಖ ಖಾತೆಗಳಿಗೆ ಉಭಯ ಪಕ್ಷಗಳ ನಾಯಕರು ಪಟ್ಟು ಹಿಡಿದಿರುವುದು ಸಚಿವ ಸಂಪುಟ ವಿಸ್ತರಣೆಗೆ ಕಗ್ಗಂಟಾಗಿ ಪರಿಣಮಿಸಿದೆ.

ಸಚಿವ ಸಂಪುಟ ವಿಸ್ತರಣೆ ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ನಲ್ಲಿ ಭಿನ್ನಮತ ತಲೆದೋರುವ ಸಾಧ್ಯತೆಯಿದೆ. ಇದರ ಲಾಭವನ್ನು ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂಬ ಮಾಹಿತಿಯನ್ನು ಗುಪ್ತಚರ ಇಲಾಖೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ನೀಡಿದೆ ಎನ್ನಲಾಗಿದೆ.

ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲ ಪಡೆಯುವ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರಿದ್ದು, ಅವರನ್ನು ಸೆಳೆದು ಸರ್ಕಾರ ರಚಿಸುವುದು ಅಥವಾ ಭಿನ್ನಮತದ ಕಾರಣಕ್ಕೆ ಸರ್ಕಾರ ಪತನಗೊಂಡರೆ ಮಧ್ಯಾವಧಿ ಚುನಾವಣೆಗೆ ಮುಂದಾಗುವುದು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಸರ್ಕಾರ ರಚನೆಯ ಮಾತುಗಳನ್ನಾಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...