alex Certify
ಕನ್ನಡ ದುನಿಯಾ       Mobile App
       

Kannada Duniya

ಹೈಕಮಾಂಡ್ ಬುಲಾವ್: ದೆಹಲಿಗೆ ತೆರಳಿದ ಸಿದ್ದರಾಮಯ್ಯ

Chief Minister of the southern Indian state of Karnataka Siddaramaiah arrives to attend a Congress party leaders meeting in New Delhi on December 27, 2013. In the first major poll exercise after the party's drubbing in recent Assembly elections, Congress Party vice-president Rahul Gandhi  held a strategy session with top leaders and Chief Ministers of 12 Congress-ruled states to make the party fighting fit for the up coming Parliament election. AFP PHOTO/RAVEENDRAN        (Photo credit should read RAVEENDRAN/AFP/Getty Images)

ಸದ್ಯದಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ಅತೃಪ್ತರ ಮೂಗಿಗೆ ತುಪ್ಪ ಸವರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಈಗಾಗಲೇ ರಾಜ್ಯ ಕಾಂಗ್ರೆಸ್ ನ ಆಂತರಿಕ ಕಲಹ, ಉಪ ಚುನಾವಣೆ, ಪಂಚಾಯತ್ ಚುನಾವಣೆ ಫಲಿತಾಂಶದಲ್ಲಿ ಕಳಪೆ ಪ್ರದರ್ಶನ ನೀಡಿರುವ ಕುರಿತಾಗಿ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಈ ನಡುವೆ ಸಚಿವ ಸಂಪುಟ ಪುನಾರಚನೆ ಕುರಿತಾಗಿಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.

ವಿಶೇಷವೆಂದರೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ದೆಹಲಿಗೆ ತೆರಳಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬುಲಾವ್ ನೀಡಿರುವುದು ಕುತೂಹಲಕ್ಕೆ ಎಡೆಮಾಡಿ ಕೊಟ್ಟಿದೆ. ಅಲ್ಲದೇ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯ ಕೂಗೂ ಸಹ ಬಲವಾಗಿ ಕೇಳಿ ಬಂದಿರುವುದರಿಂದ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...