alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯನವರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ

Siddaramaiah

ಅಂತೂ ಇಂತೂ ದುಬಾರಿ ವಾಚ್ ಪ್ರಕರಣ ಸುಖಾಂತ್ಯಗೊಳ್ಳುತ್ತಿದ್ದಂತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಹೌದು. ಇತ್ತೀಚೆಗೆ ಸಿದ್ದರಾಮಯ್ಯ ಅವರ ವಿರುದ್ದ ಹರಿಹಾಯುತ್ತಿರುವ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ, ತಮ್ಮ ಫೋನ್ ಅನ್ನು ಸಿದ್ದರಾಮಯ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದು ಅಲ್ಲದೇ ಸಿದ್ದರಾಮಯ್ಯ ಅವರ ದುಬಾರಿ ವಾಚ್ ನ ಮೂಲವನ್ನು ಪತ್ತೆ ಹಚ್ಚಲು ಪ್ರಾರಂಭಿಸಿದ ಬಳಿಕ ಕದ್ದಾಲಿಕೆ ನಡೆಸಲಾಗುತ್ತಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ವಿಶೇಷವೆಂದರೆ ಇದಕ್ಕೆ ಬೆಂಬಲವಾಗಿ ನಿಂತಿರುವ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಕೂಡ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದ್ದು, ತಮ್ಮ ದೂರವಾಣಿಯನ್ನೂ ಸೇರಿದಂತೆ ಹಲವು ವಿಪಕ್ಷ ನಾಯಕರ ದೂರವಾಣಿಯನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕದ್ದಾಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಒಟ್ಟಾರೆ ಈ ಪ್ರಕರಣವೂ ಸಹ ಸಿದ್ದರಾಮಯ್ಯ ಅವರನ್ನು ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆ ದಟ್ಟವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...