alex Certify
ಕನ್ನಡ ದುನಿಯಾ       Mobile App
       

Kannada Duniya

ಸದ್ಯದಲ್ಲಿಯೇ ಸಿದ್ದರಾಮಯ್ಯ ತಲೆದಂಡ..?

30bg_bgsat_Arka_31_2295719f

ಅಹಿಂದ ವರ್ಗವನ್ನು ಓಲೈಸುವುದಕ್ಕಾಗಿ ಇತರೆ ವರ್ಗವನ್ನು ನಿರ್ಲಕ್ಷಿಸಿದ್ದಾರೆಂಬ ಟೀಕೆಗೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ವಾಚ್ ಪ್ರಕರಣ ಮಗ್ಗುಲ ಮುಳ್ಳಾಗಿ ಪರಿಣಮಿಸಿದ್ದು, ಸದ್ಯದಲ್ಲಿಯೇ ‘ತಲೆದಂಡ’ವಾಗಲಿದೆ ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.

ಹೌದು. ವಿಧಾನಸಭಾ ಉಪ ಚುನಾವಣೆ, ಪ೦ಚಾಯಿತಿ ಫಲಿತಾ೦ಶದ ಹಿನ್ನಡೆಯ ಜತೆಗೆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾ೦ಧಿ ಇದೇ ಮಾ.5ರ೦ದು ದೆಹಲಿಗೆ ಬರುವ೦ತೆ ಸಿಎ೦ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗೆ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಈಗಾಗಲೇ ಪ್ರತ್ಯೇಕವಾಗಿ ವರಿಷ್ಠರನ್ನು ಭೇಟಿ ಮಾಡಿ ವರದಿ ನೀಡಿ ಮರಳಿದ್ದು, ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ವರಿಷ್ಠರನ್ನು ಭೇಟಿ ಮಾಡಿ ತಮ್ಮನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದರು ಎನ್ನಲಾಗಿದೆ. ಆದರೆ ಇದೀಗ ‘ಸಮಾಜವಾದ’ ಕಲ್ಪನೆಯ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ ಕಾಂಗ್ರೆಸ್ಸಿಗರೇ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದು, ಹಾಗಾಗಿ ಈ ಪ್ರಕರಣ ಸಿದ್ದರಾಮಯ್ಯ ಅವರಿಗೆ ಕಗ್ಗಂಟಾಗಿ ಪರಿಣಮಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಉಳಿಸಿಕೊಳ್ಳಬೇಕು ಎಂದಾದಲ್ಲಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುವುದು ಅನಿವಾರ್ಯ ಎಂದು ಹೈಕಮಾಂಡ್ ಗೆ ಬಿಂಬಿಸಲು ಕೆಲವು ಕಾಂಗ್ರೆಸ್ ನಾಯಕರು ಸಫಲರಾಗಿದ್ದಾರೆ ಎನ್ನಲಾಗಿದ್ದು, ಒಟ್ಟಾರೆ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...