alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಟರ್ನೆಟ್ ನಲ್ಲಿ ಹರಿದಾಡುತ್ತಿದೆ ಮುಖ್ಯಮಂತ್ರಿಗಳ ಕುರಿತ ಹೀಗೊಂದು ಪ್ರಶ್ನೆ?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಈಗಾಗಲೇ ಇದಕ್ಕೆ ಸಕಲ ತಯಾರಿ ನಡೆದಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಜೋಕ್ ಒಂದು ವೈರಲ್ ಆಗಿದೆ. ಇದರಲ್ಲಿ ಮೇ ತಿಂಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದವರು ಯಾರೆಂಬ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆಗೆ ನಾಲ್ಕು ಆಯ್ಕೆಗಳನ್ನೂ ನೀಡಲಾಗಿದೆ.

ಮೊದಲ ಆಯ್ಕೆಯಾಗಿ ಸಿದ್ದರಾಮಯ್ಯ, ಎರಡನೇ ಆಯ್ಕೆಯಾಗಿ ಯಡಿಯೂರಪ್ಪ, ಮೂರನೇ ಆಯ್ಕೆಯಾಗಿ ಕುಮಾರಸ್ವಾಮಿ ಹಾಗೂ ನಾಲ್ಕನೇ ಆಯ್ಕೆಯಾಗಿ ಮೇಲ್ಕಂಡ ಮೂವರೂ ಎಂಬುದನ್ನು ನೀಡಲಾಗಿದೆ

ಇದಕ್ಕೆ ಕಾರಣವೂ ಇಲ್ಲದಿಲ್ಲ. ಯಾಕೆಂದರೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸದಿದ್ದರೂ ಕಳೆದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದರು.

ಆ ಬಳಿಕ ರಾಜ್ಯಪಾಲ ವಜುಭಾಯ್ ವಾಲಾ, ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಪಡೆದಿದ್ದ ಬಿಜೆಪಿಯ ಯಡಿಯೂರಪ್ಪರನ್ನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದ್ದರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರಾದರೂ ಬಹುಮತ ಸಾಬೀತುಪಡಿಸಲಾಗದ ಕಾರಣ ವಿಶ್ವಾಸ ಮತಯಾಚನೆಗೆ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದೀಗ ಕುಮಾರಸ್ವಾಮಿಯವರು ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರಶ್ನೆಗೆ ಮೇಲ್ಕಂಡ ಮೂವರೂ ಎಂಬ ಆಯ್ಕೆ ಸರಿಯಾಗಬಹುದೇನೋ?

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...