alex Certify
ಕನ್ನಡ ದುನಿಯಾ       Mobile App
       

Kannada Duniya

ದಾಖಲಾತಿ ತಿದ್ದುಪಡಿಗೆ ಮುಂದಾಗಿದ್ರಾ ಅಧಿಕಾರಿಗಳು ?

arvind jadavರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್, ತಮ್ಮ ತಾಯಿಯವರ ಹೆಸರಿನಲ್ಲಿ ಸರ್ಜಾಪುರ ಹೋಬಳಿ ರಾಮನಾಯಕನಹಳ್ಳಿಯಲ್ಲಿನ ಸರ್ವೇ ನಂ. 29 ರಲ್ಲಿ ಭೂ ಕಬಳಿಕೆ ಮಾಡಲು ಮುಂದಾಗಿದ್ದರೆಂಬ ಆರೋಪ ವಿವಾದಕ್ಕೆ ಕಾರಣವಾಗಿದೆ.

ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಅರವಿಂದ್ ಜಾಧವ್ ಅವರ ಆಪ್ತ ಸಹಾಯಕ ಸತೀಶ್ ನೇತೃತ್ವದಲ್ಲಿ ದಾಖಲೆಗಳನ್ನು ತಿದ್ದುಪಡಿ ಮಾಡಲು ಯತ್ನಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಇದಕ್ಕೆ ಇಂಬು ನೀಡುವಂತೆ ಕಂದಾಯ ಭವನದಲ್ಲಿರುವ ಉಪ ವಿಭಾಗಾಧಿಕಾರಿಗಳ ಕಛೇರಿಯಲ್ಲಿ ಅವಧಿ ಮುಗಿದರೂ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳು ಮಾಧ್ಯಮಗಳ ಕ್ಯಾಮರಾ ಕಣ್ಣಿಗೆ ಸಿಕ್ಕಿ ಬಿದ್ದಿದ್ದಾರೆ.

ದಾಖಲೆಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಮಾಧ್ಯಮ ವರದಿಗಾರರು ಸ್ಥಳಕ್ಕೆ ಧಾವಿಸಿದ್ದು, ಈ ವೇಳೆ ಉಪ ವಿಭಾಗಾಧಿಕಾರಿಗಳ ಕಛೇರಿಯ ಲೈಟ್ ಆಫ್ ಮಾಡಲಾಗಿದೆ. ಅಲ್ಲದೇ ಆನೇಕಲ್ ವಿಭಾಗದ ವಿಶೇಷ ತಹಶೀಲ್ದಾರ್ ಹನುಮಂತಪ್ಪ ತರಾತುರಿಯಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಉಪ ವಿಭಾಗಾಧಿಕಾರಿಗಳ ಕಛೇರಿಯ ಮುಖ್ಯ ಗೇಟ್ ಗೆ ಬೀಗ ಹಾಕದೆ ಅಧಿಕಾರಿಗಳು ತೆರಳಿದ್ದಾರೆನ್ನಲಾಗಿದ್ದು, ಸ್ಥಳಕ್ಕೆ ಹಲಸೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...