alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಮಾಡಿಕೆರೆ ಕ್ರಾಸ್ ಬಳಿ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಮುರಳಿ(45), ಅಶ್ವತ್ಥಪ್ಪ(55), ಚಲಪತಿ(35) ಸ್ಥಳದಲ್ಲೇ ಸಾವು ಕಂಡವರು. ನಂಜುಂಡಪ್ಪ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬೆಳಿಗ್ಗೆ ಆಟೋದಲ್ಲಿ ಚಿಂತಾಣಿಯಿಂದ ದೇವಾಲಯಕ್ಕೆ ಹೊರಟಿದ್ದ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...