alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಅಕ್ಕ, ತಮ್ಮ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜೆ.ವೆಂಕಟಾಪುರ ಬಳಿ ನಡೆದ ಅಪಘಾತದಲ್ಲಿ ಅಕ್ಕ, ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಅಕ್ಕ, ತಮ್ಮ ಸಾವನ್ನಪ್ಪಿದ್ದಾರೆ. ಭಾಗ್ಯಮ್ಮ(35, ಮುರಳಿ(30) ಮೃತಪಟ್ಟವರೆಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಭಾಗ್ಯಮ್ಮ ಟೈಪಿಸ್ಟ್ ಆಗಿದ್ದು, ಸಹೋದರನನ್ನು ಬಸ್ ನಿಲ್ದಾಣಕ್ಕೆ ಬಿಡಲು ಸ್ಕೂಟಿಯಲ್ಲಿ ಹೊರಟಿದ್ದಾರೆ.

ಈ ವೇಳೆ ಎದುರಿನಿಂದ ಅತಿವೇಗವಾಗಿ ಬಂದ ಬಸ್, ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...