alex Certify
ಕನ್ನಡ ದುನಿಯಾ       Mobile App
       

Kannada Duniya

ಕೈ ತೊಳೆಯಲು ಹೋದಾಗಲೇ ದುರಂತ

ಚಿಕ್ಕಬಳ್ಳಾಪುರ: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಬಳಿಕ ಕೈ ತೊಳೆಯಲು ಕೆರೆಗೆ ಇಳಿದ, ಇಬ್ಬರು ಬಾಲಕರು ನೀರು ಪಾಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ತಿಪ್ಪೇನಹಳ್ಳಿಯಲ್ಲಿ ನಡೆದಿದೆ.

ಯಶವಂತ್(12), ಪ್ರೀತಂ(9) ಮೃತಪಟ್ಟ ಬಾಲಕರೆಂದು ಗುರುತಿಸಲಾಗಿದೆ. ಮತ್ತೊಬ್ಬ ಬಾಲಕ ಮನೋಜ್ ನನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಬಾಲಕರು ಕೈ ತೊಳೆಯಲು ಕೆರೆ ನೀರಿಗೆ ಇಳಿದಿದ್ದ ಸಂದರ್ಭದಲ್ಲಿ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...