alex Certify
ಕನ್ನಡ ದುನಿಯಾ       Mobile App
       

Kannada Duniya

ಚಿಂತಾಮಣಿಯಲ್ಲಿ ನಡೆದಿದೆ ಬೆಚ್ಚಿಬೀಳಿಸುವ ಕೃತ್ಯ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಕಾಮುಕರು ಹೇಯಕೃತ್ಯ ಎಸಗಿದ್ದಾರೆ.

ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ದುಷ್ಕರ್ಮಿಗಳು, ಕತ್ತು ಹಿಸುಕಿ ಬಾಲಕಿಯನ್ನು ಕೊಲೆ ಮಾಡಿದ್ದಾರೆ.

ರಾತ್ರಿ 9 ಗಂಟೆ ಸುಮಾರಿಗೆ ಬಾಲಕಿ ತಾಯಿಯೊಂದಿಗೆ ಮಲಗಿದ್ದು, ತಾಯಿ ಕೂಲಿ ಕೆಲಸ ಕೇಳಲು ಹೊರಗೆ ಹೋಗಿದ್ದಾರೆ.

ಈ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಮನೆಗೆ ಬಂದ ತಾಯಿ ಗಾಬರಿಯಿಂದ ಮಗಳಿಗಾಗಿ ಹುಡುಕಾಡಿದ್ದಾರೆ. ಬಾಲಕಿಗಾಗಿ ರಾತ್ರಿಯೆಲ್ಲಾ ಹುಡುಕಾಟ ನಡೆಸಿದ್ದರೂ ಸುಳಿವು ಸಿಕ್ಕಿಲ್ಲ.

ಬೆಳಿಗ್ಗೆ ಗ್ರಾಮದ ಹೊರವಲಯದಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...