alex Certify
ಕನ್ನಡ ದುನಿಯಾ       Mobile App
       

Kannada Duniya

ಅನೈತಿಕ ಸಂಬಂಧ ಹೊಂದಿದ್ದವ ಅನುಮಾನಾಸ್ಪದ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಅಣಕನೂರು ಬಳಿ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಸಾವಿನ ಕುರಿತಾಗಿ ಅನುಮಾನ ವ್ಯಕ್ತವಾಗಿದೆ.

26 ವರ್ಷದ ವ್ಯಕ್ತಿಗೆ ಮದುವೆಯಾಗಿ 1 ಮಗುವಿದ್ದು, ಆತ ಗಂಡನನ್ನು ತೊರೆದಿದ್ದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. 6 ವರ್ಷಗಳಿಂದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ವ್ಯಕ್ತಿ ಮಹಿಳೆಯೊಂದಿಗೆ ಬೈಕ್ ನಲ್ಲಿ ತೆರಳುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಆದರೆ, ಅಪಘಾತದಲ್ಲಿ ಮಹಿಳೆಗೆ ಯಾವುದೇ ಗಾಯಗಳಾಗಿಲ್ಲ. ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಮಹಿಳೆ ಹೇಳಿದ್ದಾಳೆ. ಮೃತನ ಕುಟುಂಬದವರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಮಹಿಳೆ, ನಾನು ಪತಿಯಿಂದ ದೂರವಾದ ಬಳಿಕ ವ್ಯಕ್ತಿಯೊಂದಿಗೆ ಇದ್ದೆ. ಇತ್ತೀಚೆಗೆ ಆತ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಜಗಳ ಮಾಡುತ್ತಿದ್ದ. ಬೈಕ್ ನಲ್ಲಿ ನಾವಿಬ್ಬರು ತೆರಳುವಾಗ ಕಾರು ಡಿಕ್ಕಿ ಹೊಡೆಯಿತು. ಇದರಿಂದ ಪ್ರಜ್ಞೆ ತಪ್ಪಿತು. ನಂತರದಲ್ಲಿ ಏನಾಗಿದೆ ಎಂಬುದು ತಿಳಿದಿಲ್ಲವೆಂದು ಹೇಳಿದ್ದಾಳೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...