alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸಾವು

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಗ್ರಾಮದ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ದೀಪಾ, ಶ್ರೇಯಾ, ಡಾಕಪ್ಪ ಹಾಗೂ ಮತ್ತೊಬ್ಬರು ಮೃತಪಟ್ಟವರೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...