alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಅತ್ಯಾಚಾರ, ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್

ಚಿಕ್ಕಮಗಳೂರು: ವಿಜಯಪುರದಲ್ಲಿ ದಲಿತ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ, ಚಿಕ್ಕಮಗಳೂರಿನಲ್ಲಿ ಬಂದ್ ಗೆ ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿವಿಧ ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳ ವತಿಯಿಂದ ಬೆಳಿಗ್ಗೆ 6 ರಿಂದ ಸಂಜೆ 6 ರವೆಗೆ ಬಂದ್ ಗೆ ಕರೆ ನೀಡಲಾಗಿದೆ.

ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಶಾಂತಿಯುತ ಬಂದ್ ಗೆ ಸೂಚನೆ ನೀಡಿದ್ದು, ಬಹುತೇಕ ಶಾಲಾ- ಕಾಲೇಜ್ ಆರಂಭವಾಗಿವೆ. ಮತ್ತೆ ಕೆಲವು ಶಾಲೆಗಳಿಗೆ ರಜೆ ನೀಡಲಾಗಿದೆ.

ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಚಿಕ್ಕಮಗಳೂರು ಬಸ್ ನಿಲ್ದಾಣದ ಬಳಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಬೆಳಿಗ್ಗೆಯಿಂದ ವಾಹನ ಸಂಚಾರ ವಿರಳವಾಗಿತ್ತು. ನಂತರ ಬಸ್ ಸಂಚಾರ ಆರಂಭವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...