alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಸಾವು

ಚಿಕ್ಕಮಗಳೂರು: ಕೇರಳದಿಂದ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೊಟ್ಟಾಯಂ ಕಂಜಿರಪಲ್ಲಿಯ ಅಮರ್ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ಬಸ್, ಮಾಗಡಿ ಹ್ಯಾಂಡ್ ಪೋಸ್ಟ್ ಬಳಿ ಕೆರೆಗೆ ಉರುಳಿ ಬಿದ್ದು, ಈ ದುರ್ಘಟನೆ ಸಂಭವಿಸಿದೆ.

ಐರಿನ್ ಮರಿಯಾ ಜಾರ್ಜ್, ಮರಿನ್ ಸಬಾಸ್ಟಿನ್ ಮೃತಪಟ್ಟ ವಿದ್ಯಾರ್ಥಿನಿಯರಾಗಿದ್ದಾರೆ. ವೇಗವಾಗಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿದೆ.

ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಅಪಾಯಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಿಕ್ಕಮಗಳೂರು ಹಾಗೂ ಮಂಗಳೂರು ಆಸ್ಪತ್ರೆಗಳಿಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...