alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಬಾ ಬುಡನ್ ಗಿರಿಯಲ್ಲಿ ಲಘು ಲಾಠಿ ಪ್ರಹಾರ

ಚಿಕ್ಕಮಗಳೂರು : ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಕೇಸರಿ ಧ್ವಜ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ದತ್ತಪೀಠದಲ್ಲಿ ಪಾದುಕೆ ದರ್ಶನಕ್ಕೆ ಸಹಸ್ರಾರು ಭಕ್ತರು ಆಗಮಿಸಿದ್ದ ಹಿನ್ನಲೆಯಲ್ಲಿ, ಭಾರೀ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದ್ದು, ಕೆಲವು ಭಕ್ತರು ನಿಷೇಧಿತ ಪ್ರದೇಶದಲ್ಲಿ ಕೇಸರಿ ಧ್ವಜ ಕಟ್ಟಲು ಮುಂದಾಗಿದ್ದಾರೆ.

ಇದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದು, ಉದ್ರಿಕ್ತರು ಮತ್ತೆ ಧ್ವಜ ಕಟ್ಟಲು ಮುಂದಾಗಿದ್ದಾರೆ. ಆಗ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತವರಣವಿದ್ದು, ಎಸ್.ಪಿ. ಅಣ್ಣಾಮಲೈ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದರ ನಡುವೆಯೇ ದತ್ತ ಭಕ್ತರು ಪಾದುಕೆ ದರ್ಶನ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...