alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಟ್ಟಿಗೆಹಾರದಲ್ಲಿ ನಡೆದಿದೆ ಸಿನಿಮೀಯ ಘಟನೆ

ಚಿಕ್ಕಮಗಳೂರು: ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಅಪಹರಣಕ್ಕೆ ಒಳಗಾಗಿದ್ದ ಬಾಲಕಿಯನ್ನು ಪೊಲೀಸರು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.

ತಂದೆಯೊಂದಿಗೆ ಟೀ ಕುಡಿಯುತ್ತಿದ್ದ ಬಾಲಕಿಯನ್ನು ಬಾಲಕನೊಬ್ಬ ಒಮಿನಿಯಲ್ಲಿ ಅಪಹರಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ರಕ್ಷಿಸುವ ಪ್ರಯತ್ನ ನಡೆಸಿದರೂ, ಅಪಹರಣಕಾರ ಅಲ್ಲಿಂದ ವಾಹನದಲ್ಲಿ ಪರಾರಿಯಾಗಿದ್ದಾನೆ.

ಕೂಡಲೇ ಬಣಕಲ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಒಮಿನಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಅಪಹರಣ ಮಾಡಿದ್ದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...