alex Certify
ಕನ್ನಡ ದುನಿಯಾ       Mobile App
       

Kannada Duniya

ಬರ್ಬರ ಹತ್ಯೆ ಕಂಡು ಬೆಚ್ಚಿಬಿದ್ದ ಜನ

ಚಿಕ್ಕಮಗಳೂರು: ವ್ಯಕ್ತಿಯ ಅರ್ಧ ದೇಹವನ್ನು ಮಣ್ಣಲ್ಲಿ ಹೂತು ಹಾಕಿ, ಉಳಿದ ಭಾಗಕ್ಕೆ ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

45 ವರ್ಷದ ಸಂಜೀವ್ ಕುಮಾರ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲ್ಲೂಕಿನ ಕನ್ನಹಳ್ಳಿಯ ಹೊರ ವಲಯದಲ್ಲಿ ಸಂಜೀವ್ ಕುಮಾರ್ ದೇಹ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಂಜೀವ್ ಕುಮಾರ್ ಅರ್ಧ ದೇಹವನ್ನು ಮಣ್ಣಿನಲ್ಲಿ ಹೂಳಲಾಗಿದೆ. ಉಳಿದ ಭಾಗಕ್ಕೆ ಬೆಂಕಿ ಹಚ್ಚಲಾಗಿದ್ದು, ಇದನ್ನು ಕಂಡವರು ಬೆಚ್ಚಿ ಬಿದ್ದಿದ್ದಾರೆ.

ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಅನೈತಿಕ ಸಂಬಂಧದ ಕಾರಣದಿಂದ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...