alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬಯಲಾಯ್ತು ರಹಸ್ಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ 20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಓರ್ವನನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ವಿದ್ಯಾರ್ಥಿನಿ ಡೆತ್ ನೋಟ್ ನಲ್ಲಿ ಸಾವಿಗೆ ಕಾರಣವೇನು ಎಂಬುದನ್ನು ತಿಳಿಸಿದ್ದು, ಇದರ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿದ್ಯಾರ್ಥಿನಿ ಅನ್ಯಕೋಮಿನ ಯುವಕನೊಂದಿಗೆ ಗೆಳೆತನ ಹೊಂದಿದ್ದು, ಲವ್ ಜಿಹಾದ್ ಹೆಸರಲ್ಲಿ ಆಕೆಗೆ ಸ್ವಜಾತಿಯ ಯುವಕ ಬೆದರಿಕೆ ಹಾಕಿದ್ದಾನೆ. ಸಂಘಟನೆ ಹಾಗೂ ರಾಜಕೀಯ ಪಕ್ಷವೊಂದರ ಕಾರ್ಯಕರ್ತರು ಕೂಡ ಜನವರಿ 5 ರಂದು ಬೆದರಿಕೆ ಹಾಕಿದ್ದಾರೆ.

ಅನ್ಯಕೋಮಿನ ಯುವಕನೊಂದಿಗೆ ಗೆಳೆತನ ಬಿಡುವಂತೆ ಬೆದರಿಸಿದ್ದಾರೆ. ಮನೆಗೆ ಹೋಗಿ ವಿದ್ಯಾರ್ಥಿನಿ ಹಾಗೂ ಆಕೆಯ ತಾಯಿಗೆ ನೀವು ಲವ್ ಜಿಹಾದ್ ಗೆ ಬೆಂಬಲಿಸುತ್ತೀದ್ದೀರಿ. ಅದನ್ನು ನಿಲ್ಲಿಸಬೇಕೆಂದು ತಾಕೀತು ಮಾಡಿದ್ದಾರೆ.

ಅಲ್ಲದೇ ಯುವಕನೊಬ್ಬ ಯುವತಿಯ ಜತೆ ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದ ಮಾಹಿತಿಗಳನ್ನು ಸ್ಕ್ರೀನ್ ಶಾಟ್ ತೆಗೆದು ಬೇರೆ ಗುಂಪುಗಳಿಗೆ ಹಾಕಿ ವೈರಲ್ ಮಾಡಿದ್ದಾನೆ.

ಇದರಿಂದ ಮನನೊಂದ ವಿದ್ಯಾರ್ಥಿನಿ ಜನವರಿ 6 ರಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಕಾರಣವಾದ ಮಾಹಿತಿಗಳನ್ನು ತಿಳಿಸಿದ್ದು, ಎಸ್.ಪಿ. ಅಣ್ಣಾಮಲೈ ಮಾರ್ಗದರ್ಶನದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...