alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಮಕ್ಕಳ ಕಳ್ಳನೆಂದು ತಿಳಿದು ಮಗುವಿನ ತಂದೆ ಮೇಲೆಯೇ ಹಲ್ಲೆ

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರ ಕುರಿತು ಹಬ್ಬುತ್ತಿರುವ ಸುಳ್ಳು ವದಂತಿಯ ಪರಿಣಾಮ ಈಗಾಗಲೇ ಕೆಲವರು ಬಲಿಯಾಗಿದ್ದಾರೆ. ಈಗ ಇಂತಹುದೇ ಮತ್ತೊಂದು ಪ್ರಕರಣ ನಡೆದಿದ್ದು, ಮಕ್ಕಳ ಕಳ್ಳನೆಂದು ಭಾವಿಸಿ ಮಗುವಿನ ತಂದೆ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಆಟೋದಲ್ಲಿದ್ದ ತನ್ನ ಎರಡನೇ ಪತ್ನಿಯ ಮಗಳನ್ನು ಹಿಡಿದು ಎಳೆದಿದ್ದಾನೆ.

ಆತ ಮಗುವನ್ನು ಅಪಹರಿಸಲು ಯತ್ನಿಸುತ್ತಿದ್ದಾನೆ ಎಂದು ಭಾವಿಸಿದ ಸ್ಥಳೀಯರು ವ್ಯಕ್ತಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆತ ಸಮಜಾಯಿಷಿ ನೀಡಲು ಯತ್ನಿಸಿದರೂ ಸಾರ್ವಜನಿಕರ ಗುಂಪು ಕಿವಿಗೊಟ್ಟಿಲ್ಲ. ಆ ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ವೇಳೆ ಸತ್ಯಾಂಶ ಬೆಳಕಿಗೆ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...