alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂಜಿ ಮಾಡಿಸಲು ಹೋಗಿ ಯಡವಟ್ಟಾಯ್ತು

child mysu

ಮೈಸೂರು: ಮುಸ್ಲಿಂ ಧಾರ್ಮಿಕ ವಿಧಾನದಂತೆ, ಮುಂಜಿ ಮಾಡಿಸಲು ಹೋಗಿದ್ದ ಸಂದರ್ಭದಲ್ಲಿ ವೈದ್ಯರು, ಮಾಡಿದ ಯಡವಟ್ಟಿನಿಂದ 2 ವರ್ಷದ ಮಗುವಿನ ಜೀವಕ್ಕೆ ತೊಂದರೆ ಉಂಟಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ನಿವಾಸಿಗಳಾದ ದಂಪತಿ, ತಮ್ಮ 2 ವರ್ಷದ ಮಗುವಿಗೆ ಮುಂಜಿ ಮಾಡಿಸುವ ಉದ್ದೇಶದಿಂದ ಇಲ್ಲಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದುಕೊಂಡು ಹೋಗಿದ್ದು, ಈ ಸಂದರ್ಭದಲ್ಲಿ ವೈದ್ಯರು ಯಡವಟ್ಟು ಮಾಡಿದ್ದಾರೆ ಎನ್ನಲಾಗಿದೆ. ಮಗುವಿಗೆ ಅಗತ್ಯವಿಲ್ಲದಿದ್ದರೂ, ಹೆಚ್ಚಿನ ಪ್ರಮಾಣದಲ್ಲಿ ಅನಸ್ತೇಶಿಯಾ ನೀಡಿದ್ದು, ಇದರಿಂದ ಮಗುವಿನ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಮಗು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ ಎಂದು ಹೇಳಲಾಗಿದೆ.

ಇದರಿಂದ ಕಂಗಾಲಾಗಿರುವ ಮಗುವಿನ ಪೋಷಕರು, ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೂ ದೂರು ನೀಡುವುದಾಗಿ ತಿಳಿಸಿದ್ದಾರೆ. ಅನಗತ್ಯವಾಗಿ ಅನಸ್ತೇಶಿಯಾ ನೀಡಿದ್ದರಿಂದಲೇ ಹೀಗೆ ಆಗಿದೆ ಎಂದು ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...