alex Certify
ಕನ್ನಡ ದುನಿಯಾ       Mobile App
       

Kannada Duniya

ಲೈಂಗಿಕ ಕಿರುಕುಳ ನೀಡಿದ್ರಾ ಜಿಲ್ಲಾ ಶಸ್ತ್ರ ಚಿಕಿತ್ಸಕ

ಚಿತ್ರದುರ್ಗ: ಜಿಲ್ಲಾ ಶಸ್ತ್ರ ಚಿಕಿತ್ಸಕನ ವಿರುದ್ಧ ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪದ ಮೇಲೆ ದೂರು ದಾಖಲಾಗಿದೆ.

ಜಿಲ್ಲಾ ಆಸ್ಪತ್ರೆಯ ಮಹಿಳಾ ಆರೋಗ್ಯ ತರಬೇತಿ ಕೇಂದ್ರದಲ್ಲಿನ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಕಚೇರಿಗೆ ಕರೆಸಿಕೊಂಡು ವಿಸಿಟಿಂಗ್ ಕಾರ್ಡ್ ಕೊಟ್ಟು ಫೋನ್ ಮಾಡು, ಏನು ಬೇಕು ಕೇಳು ಎಂದು ಪೀಡಿಸುತ್ತಾರೆ ಎಂದು ವಿದ್ಯಾರ್ಥಿನಿ ದೂರಿದ್ದಾರೆ.

ಅವರು ಹೇಳಿದಂತೆ ಕೇಳದ ಕಾರಣ ಅವಾಚ್ಯ ಪದಗಳಿಂದ ನಿಂದಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಆದರೆ, ಆರೋಪವನ್ನು ಜಿಲ್ಲಾ ಶಸ್ತ್ರ ಚಿಕಿತ್ಸಕ ಅಲ್ಲಗಳೆದಿದ್ದು, ಆಕೆ ತಮ್ಮ ಮಗಳಿಗಿಂತ ಚಿಕ್ಕ ವಯಸ್ಸಿನವಳಾಗಿದ್ದಾಳೆ. ಆರೋಪದ ಹಿಂದೆ ಬೇರೆ ಉದ್ದೇಶವಿರಬಹುದೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...