alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟ ವ್ಯಕ್ತಿ..?

ctd-durh

ಚಿತ್ರದುರ್ಗ: ವೈದ್ಯರ ನಿರ್ಲಕ್ಷ್ಯದಿಂದ ಸಕಾಲಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತರುವನೂರಿನ ದೇವರಾಜ್(45) ಮೃತಪಟ್ಟವರು.

ರಾತ್ರಿ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಅವರಿಗೆ ಸಕಾಲಕ್ಕೆ ಚಿಕಿತ್ಸೆ ನೀಡದ ಕಾರಣ ಮೃತಪಟ್ಟಿದ್ದಾರೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.

ರಾತ್ರಿ 12 ಗಂಟೆಗೆ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ನೀಡುವಂತೆ ಕುಟುಂಬದವರು ಬೇಡಿಕೊಂಡರೂ, ಬೆಳಗಿನ ಜಾವ 3 ಗಂಟೆವರೆಗೂ ಚಿಕಿತ್ಸೆ ನೀಡಿಲ್ಲ ಎನ್ನಲಾಗಿದೆ.

ಚಿಕಿತ್ಸೆ ಸಿಗದೇ ದೇವರಾಜ್ ಮೃತಪಟ್ಟಿದ್ದು, ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಕುಟುಂಬದವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...