alex Certify
ಕನ್ನಡ ದುನಿಯಾ       Mobile App
       

Kannada Duniya

ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಿದ ಸಿಐಡಿ

pu board

ಈಗಾಗಲೇ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ನೊಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆಯೇ ಗುರುವಾರ ಪಿಯು ಬೋರ್ಡ್ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಹಗರಣದ ಕುರಿತಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಐಡಿ, ಡಿಐಜಿ ಸೋನಿಯಾ ನಾರಂಗ್ ನೇತೃತ್ವದ ಸಿಐಡಿ ಅಧಿಕಾರಿಗಳ ತಂಡ ಹಠಾತ್ ದಾಳಿ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಕಲೆ ಹಾಕುತ್ತಿದ್ದು ಮಾತ್ರವಲ್ಲ, ಪಿಯು ಬೋರ್ಡ್ ನಿರ್ದೇಶಕಿ ಪಲ್ಲವಿ ಮತ್ತು ಇತರ ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದಾರೆನ್ನಲಾಗಿದೆ.

ವಿಶೇಷವೆಂದರೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಮಾ.21 ರಂದು ನಡೆಸಿದ ರಸಾಯನ ಶಾಸ್ತ್ರದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ್ದ ನಿರ್ದೇಶಕಿ ಪಲ್ಲವಿ, ಘಟನೆಯ ಹೊಣೆಯನ್ನು ತಾನೇ ಹೊರುತ್ತೇನೆ ಎಂದಿದ್ದರಲ್ಲದೇ ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದನ್ನಿಲ್ಲಿ ಸ್ಮರಿಸಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...