alex Certify
ಕನ್ನಡ ದುನಿಯಾ       Mobile App
       

Kannada Duniya

‘ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ’

ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರಲಿದ್ದು, ಮೇ 17 ಅಥವಾ 18 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕಂಠೀರವ ಸ್ಟೇಡಿಯಂನಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದೇನೆ ಎಂದು ಅವರು ವಿಶ್ವಾಸದ ನುಡಿಗಳನ್ನಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದು, ಬಿ.ಜೆ.ಪಿ. ಪರ ಅಲೆ ಕಂಡು ಬಂದಿದೆ. ಪ್ರಧಾನಿಯವರ ಪ್ರಚಾರದ ಬಳಿಕ ವಿದ್ಯುತ್ ಸಂಚಾರವಾಗಲಿದೆ. ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದರೂ, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಸ್ಪಂದಿಸಿಲ್ಲ. ನೆಪ ಮಾತ್ರಕ್ಕೆ ಸಹಕಾರಿ ಸಂಘಗಳ ಸಾಲವನ್ನು ಮನ್ನಾ ಮಾಡಿದ್ದಾರೆ. ಆದರೆ, ರೈತರಿಗೆ ಸಾಲ ಸಿಗದಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...