alex Certify
ಕನ್ನಡ ದುನಿಯಾ       Mobile App
       

Kannada Duniya

3 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಬಿ.ಎಸ್.ವೈ. ಪ್ರಮಾಣ

ಬೆಂಗಳೂರು: ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಅವರು ನಾಳೆ ಬೆಳಿಗ್ಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

2007 ರ ನವೆಂಬರ್ 12 ರಂದು ಮತ್ತು 2008 ರ ಮೇ 30 ರಂದು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 2007 ರ ನವೆಂಬರ್ 12 ರಿಂದ 19 ರ ವರೆಗೆ 7 ದಿನ, 2008 ರ ಮೇ 30 ರಿಂದ 2011 ರ ಜುಲೈ 31 ರವರೆಗೆ 3 ವರ್ಷ 62 ದಿನಗಳ ಕಾಲ ಅವರು ಮುಖ್ಯಮಂತ್ರಿಯಾಗಿದ್ದರು. ಈಗ 3 ನೇ ಬಾರಿಗೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈಗಾಗಲೇ ರಾಜ್ಯಪಾಲರಿಂದ ಅಧಿಕೃತ ಆಹ್ವಾನ ಬಂದಿದ್ದು, ನಾಳೆ ಬೆಳಿಗ್ಗೆ 9.30 ಕ್ಕೆ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆಗಳು ನಡೆದಿವೆ. ಮೊದಲಿಗೆ ಮಧ್ಯಾಹ್ನ 12.20 ಕ್ಕೆ ಬಿ.ಎಸ್.ವೈ. ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತಾದರೂ, ಬೆಳಿಗ್ಗೆ 9.30 ಕ್ಕೆ ಪ್ರಮಾಣವಚನ ಸ್ವೀಕರಿಸಲು ಬಿ.ಎಸ್.ವೈ. ಸಜ್ಜಾಗಿದ್ದಾರೆ. ಮೇ 27 ರೊಳಗೆ ಬಹುಮತವನ್ನು ಸಾಬೀತುಪಡಿಸಲು ರಾಜ್ಯಪಾಲರು ಬಿ.ಎಸ್.ವೈ. ಅವರಿಗೆ ಸೂಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...