alex Certify
ಕನ್ನಡ ದುನಿಯಾ       Mobile App
       

Kannada Duniya

ತಡರಾತ್ರಿವರೆಗೂ ರಾಜ್ಯದ ಜನತೆಯ ಅಳಲು ಆಲಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ’ಜನತಾದರ್ಶನ’ ಕ್ಕೆ ಶನಿವಾರ ಮತ್ತೆ ಅಧಿಕೃತವಾಗಿ ಚಾಲನೆ ನೀಡಿದ್ದು, ಬೆಳಿಗ್ಗೆ ಆರಂಭವಾದ ಜನತಾದರ್ಶನ ತಡವಾತ್ರಿವರೆಗೂ ನಡೆಯಿತು. ಈ ವೇಳೆ ಖುದ್ದು ಸಿಎಂ 1,056ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದರು.

ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಜನ ನಾಡಿನ ದೊರೆಯ ಎದುರು ತಮ್ಮ ಅಳಲು ತೋಡಿಕೊಂಡ ರೀತಿ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಂತಿತ್ತು. ಜನತಾದರ್ಶನದಲ್ಲಿ ಸಿಎಂ ಶೇ.50 ರಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿದರೆ, ಉಳಿದ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಫೋನ್‌ ಕರೆಗಳನ್ನು ಮಾಡಿ, ಕ್ರಮಕ್ಕೆ ಸೂಚನೆ ನೀಡಿದರು.

ಮೊದಲು ವಿಕಲಚೇತನರಿಗೆ ಸಂಬಂಧಿಸಿದ ಮನವಿಗಳನ್ನು ಆಲಿಸಿದರು. ಬಳಿಕ ಹಿರಿಯ ನಾಗರಿಕರಿಗೆ ಸಂಬಂಧಿಸಿದ ಅಹವಾಲುಗಳನ್ನು ಕೇಳಿದರು. ನಂತರ ವೈದ್ಯಕೀಯ ಚಿಕಿತ್ಸೆಗೆ ನೆರವು ಕೋರಿ ಬಂದವರಿಗೆ ವಿವಿಧ ವೈದ್ಯಕೀಯ ಸಂಸ್ಥೆಗಳ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.

ಖಾಸಗಿ ಸಾಲದ ಮೂಲಕ ಶೋಷಣೆ, ವೈದ್ಯಕೀಯ ನೆರವು, ಆರ್​ಟಿಇ ಸಮಸ್ಯೆ, ಉದ್ಯೋಗಕ್ಕಾಗಿ ಮನವಿ, ವಿವಿಧ ನೆರವು ಕೋರಿ ಬಂದ ಜನತೆಯ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಲಾಯಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...