alex Certify
ಕನ್ನಡ ದುನಿಯಾ       Mobile App
       

Kannada Duniya

ಅತಿವೃಷ್ಟಿ ಕುರಿತು ತುರ್ತು ಸಭೆ ನಡೆಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನವದೆಹಲಿಯಿಂದ ಹಿಂತಿರುಗಿದ ಕೂಡಲೇ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಹಾರ ಕಾರ್ಯಾಚರಣೆ ಕುರಿತು ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿದ್ದಾರೆ.

ಕೊಡಗಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಕಾರ್ಯ ನಿರ್ವಹಿಸುತ್ತಿವೆ.

ಮೈಸೂರು, ಮಂಡ್ಯ, ರಾಮನಗರ, ಹಾಸನ ಜಿಲ್ಲೆಗಳ ಕಂದಾಯ ಇಲಾಖೆಯ ಸಿಬ್ಬಂದಿ, ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಸಹ ಪರಿಹಾರ ಕಾರ್ಯಗಳಿಗಾಗಿ ಕೊಡಗು ಜಿಲ್ಲೆಗೆ ನಿಯೋಜಿಸಲಾಗುತ್ತಿದೆ.

ಗಂಜಿ ಕೇಂದ್ರಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಆಹಾರ ಸಾಮಗ್ರಿ, ಹೊದಿಕೆಗಳನ್ನು ಮೈಸೂರಿನಿಂದ ಕಳುಹಿಸಲಾಗುತ್ತಿದೆ. ಅಲ್ಲದೆ 200 ಜನ ಸ್ವಯಂ ಸೇವಕರು ಮೈಸೂರಿನಿಂದ ಕೊಡಗು ಜಿಲ್ಲೆಗೆ ತೆರಳುತ್ತಿದ್ದಾರೆ.

ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಕೊಡಗಿನಲ್ಲಿಯೇ ಮೊಕ್ಕಾಂ ಹೂಡಿದ್ದು ಪರಿಹಾರ ಕಾರ್ಯಾಚರಣೆ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ನಾಳೆ ಬೆಳಿಗ್ಗೆ 11.30 ಕ್ಕೆ ಮುಖ್ಯಮಂತ್ರಿಗಳು ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...