alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ವಿರುದ್ಧ ದೂರು ನೀಡಿದ ಬಿ.ಜೆ.ಪಿ.

ಬೆಂಗಳೂರು: ಬಿ.ಜೆ.ಪಿ. ಮತ್ತು ಸಂಘ ಪರಿವಾರದ ಸಂಘಟನೆಗಳವರು ಉಗ್ರವಾದಿಗಳು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಬಿ.ಜೆ.ಪಿ. ಮುಖಂಡರು ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಸಿದ್ಧರಾಮಯ್ಯ ಅವರ ವಿರುದ್ಧ ದೂರು ನೀಡಿದ್ದಾರೆ.

ಬಿ.ಜೆ.ಪಿ. ಮುಖಂಡರು ಭಯೋತ್ಪಾದಕರು ಎಂದು ಹೇಳಿಕೆ ನೀಡಿರುವುದನ್ನು ವಿರೋಧಿಸಿ, ಬಿ.ಜೆ.ಪಿ. ಜೈಲ್ ಭರೋ ಪ್ರತಿಭಟನೆ ನಡೆಸಿದೆ. ಸಂಜೆ ಮಾಜಿ ಸಚಿವ ಸುರೇಶ್ ಕುಮಾರ್, ಶಾಸಕ ಅಶ್ವಥ್ ನಾರಾಯಣ್, ಮಾಳವಿಕ ಅವಿನಾಶ್, ತೇಜಸ್ವಿನಿ ರಮೇಶ್ ಸೇರಿದಂತೆ ಹಲವು ಮುಖಂಡರು, ಸಿ.ಎಂ. ಹಾಗೂ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಪದೇ, ಪದೇ ಬಿ.ಜೆ.ಪಿ. ಮತ್ತು ಸಂಘ ಪರಿವಾರದ ಸಂಘಟನೆಗಳ ಮುಖಂಡರನ್ನು ಭಯೋತ್ಪಾದಕರು ಎಂದು ಹೇಳಿರುವುದು ಅಪರಾಧ ಮತ್ತು ಮಾನಹಾನಿಕರ ಹೇಳಿಕೆಯಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...