alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಣಕ್ಕೆ ಹಣ ಪಡೆದ್ರೆ ಕ್ರಿಮಿನಲ್ ಕೇಸ್ : ಸಿಎಂ ಸಿದ್ದರಾಮಯ್ಯ

ಹೆಣಕ್ಕೆ ಹಣ ಪಡೆಯುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಮಾಡಿದ ಸಿಎಂ, ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಇನ್ಮುಂದೆ ಹೆಣಕ್ಕೆ ಹಣ ಪಡೆಯುವಂತಿಲ್ಲ. ಹೆಣಕ್ಕೆ ಹಣ ಪಡೆದ್ರೆ ಅವ್ರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುವುದು ಎಂದಿದ್ದಾರೆ.

ಆಸ್ಪತ್ರೆ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ, ದೇಶದ ಬೃಹತ್ ಹೃದ್ರೋಗ ಆಸ್ಪತ್ರೆ ನಿರ್ಮಾಣ ಮಾಡಿದ್ದೇವೆ. ಆರೋಗ್ಯಭಾಗ್ಯ ಯೋಜನೆಯಡಿ ಹೆಲ್ತ್ ಕಾರ್ಡ್ ವಿತರಣೆಯಾಗಿದ್ದು, ಹೆಲ್ತ್ ಕಾರ್ಡ್ ತೋರಿಸಿ ಚಿಕಿತ್ಸೆ ಪಡೆಯಬಹುದು ಎಂದಿದ್ದಾರೆ.

ಮೈಸೂರು ಜಿಲ್ಲಾಭಿವೃದ್ಧಿಗೆ 5000 ಕೋಟಿ ರೂಪಾಯಿ ವೆಚ್ಛ ಮಾಡಿದ್ದೇವೆ. ಮೈಸೂರು ಪರಂಪರೆ ಉಳಿಸಿ ಕಟ್ಟಡ ನಿರ್ಮಾಣ ಮಾಡಿದ್ದೇವೆ. ಲಲಿತ್ ಮಹಲ್ ಮಾದರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣವಾಗಿದೆ. ನಾನು ಸಿಎಂ ಆದ್ಮೇಲೆ ಇದೆಲ್ಲವನ್ನೂ ಮಾಡಿದ್ದೇನೆ ಎಂದು ಸಿಎಂ ಬೆನ್ನು ತಟ್ಟಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...