alex Certify
ಕನ್ನಡ ದುನಿಯಾ       Mobile App
       

Kannada Duniya

‘ಮಾಂಸಾಹಾರಿ ಸೇವಿಸಿ ದೇಗುಲಕ್ಕೆ ಹೋಗಿದ್ದು ತಪ್ಪೇನಲ್ಲ’

ಧಾರವಾಡ: ಮೀನೂಟ ಸೇವಿಸಿ ಧರ್ಮಸ್ಥಳ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಇಬ್ಬರು ಸಚಿವರು ಭೇಟಿ ನೀಡಿದ್ದ ವಿಚಾರ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿ.ಎಂ., ಮಾಂಸಾಹಾರ ಸೇವಿಸಿ ದೇವಾಲಯಕ್ಕೆ ಹೋಗಬಾರದೆಂದು ಎಲ್ಲಿಯೂ ಹೇಳಿಲ್ಲ. ಯಾವ ದೇವರೂ ಮಾಂಸಾಹಾರ ತಿನ್ನಬಾರದು ಎಂದು ಹೇಳಿಲ್ಲ. ಅದರಲ್ಲಿ ತಪ್ಪೇನೂ ಇಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಂಸಾಹಾರ ಸೇವನೆ ಮಾಡಿ ದೇವಾಲಯಕ್ಕೆ ಹೋದರೆ ಏನಾಗುತ್ತೆ ಎಂದು ಪ್ರಶ್ನಿಸಿದ್ದಾರೆ.

ಬೇಡರ ಕಣ್ಣಪ್ಪ ಮಾಂಸವನ್ನೇ ಶಿವನಿಗೆ ನೈವೇದ್ಯ ಮಾಡಿದ್ದರು. ಯಾವ ದೇವರೂ ಮಾಂಸಾಹಾರ ಸೇವಿಸಿ ದೇಗುಲಕ್ಕೆ ಬರಬಾರದು ಎಂದು ತಿಳಿಸಿಲ್ಲ ಎಂದು ಹೇಳಿದ್ದಾರೆ.

ಭಾನುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಮೀನೂಟ ಸೇವಿಸಿದ ಬಳಿಕ ಧರ್ಮಸ್ಥಳ ದೇವಾಲಯಕ್ಕೆ ಭೇಟಿ ನೀಡಿದ್ದರು. ಇದು ಚರ್ಚೆಗೆ ಕಾರಣವಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...