alex Certify
ಕನ್ನಡ ದುನಿಯಾ       Mobile App
       

Kannada Duniya

ನಾನು ಪೂಜೆ ಮಾಡಿಲ್ಲ, ಮಾಡೋದು ಇಲ್ಲ-ಸಿದ್ದರಾಮಯ್ಯ

sidaramaiah_12ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಲಿ ಎಂಬ ಕಾರಣಕ್ಕೆ 20 ಲಕ್ಷ ರೂ. ವೆಚ್ಚದಲ್ಲಿ ಹೋಮ ನಡೆಸಲಾಗುತ್ತದೆ ಎಂಬ ವರದಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಪೂಜೆ ಮಾಡಿಲ್ಲ. ಮಾಡುವುದೂ ಇಲ್ಲ. ಪೂಜೆ ಮಾಡಿದರೆ ಮಳೆ ಬರುತ್ತದೆಂಬ ನಂಬಿಕೆಯೂ ಇಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಸಚಿವರು ಹೋಮ ಮಾಡಿಸುತ್ತಿರುವ ಕುರಿತು ತಮಗೆ ಯಾವುದೇ ಮಾಹಿತಿಯಿಲ್ಲವೆಂದು ಹೇಳಿದ್ದಾರೆ.

ಮುಂಬರುವ ಚುನಾವಣೆಯನ್ನು ತಮ್ಮ ನೇತೃತ್ವದಲ್ಲೇ ಎದುರಿಸಲಾಗುವುದು ಎಂದು ಹೇಳಿದ ಸಿದ್ದರಾಮಯ್ಯನವರು, ಚುನಾವಣೆ ಬಳಿಕ ಶಾಸಕಾಂಗ ಪಕ್ಷದ ಸಭೆ ಸೇರಿ ನೂತನ ನಾಯಕರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕುರಿತಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನೇಮಕಾತಿ ಕುರಿತು ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲರೂ ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...