alex Certify
ಕನ್ನಡ ದುನಿಯಾ       Mobile App
       

Kannada Duniya

‘ಪುತ್ರ ರಾಕೇಶ್ ಇದ್ದಿದ್ರೇ ನಾನು ಪ್ರಚಾರಕ್ಕೆ ಬರುತ್ತಿರಲಿಲ್ಲ’

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವರುಣಾ ಕ್ಷೇತ್ರದಲ್ಲಿ ಪುತ್ರ ಡಾ. ಯತೀಂದ್ರ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದಾರೆ.

ಪುತ್ರನಿಗಾಗಿ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸಿರುವ ಸಿ.ಎಂ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ವರುಣಾದಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿದ ಸಿ.ಎಂ., ಮಗ ರಾಕೇಶ್ ನೆನಪಾಗ್ತಿದ್ದಾನೆ ಎಂದು ಹೇಳಿದ್ದಾರೆ.

ರಾಕೇಶ್ ಇದ್ದಿದ್ದರೆ ನಾನು ಪ್ರಚಾರಕ್ಕೆ ಬರುತ್ತಿರಲಿಲ್ಲ. ಎಲ್ಲವನ್ನೂ ಅವನೇ ನೋಡಿಕೊಳ್ಳುತ್ತಿದ್ದ. ಮನುಷ್ಯ ಹುಟ್ಟಿದ ಮೇಲೆ ಸಾಯಲೇಬೇಕು. ಆದರೆ, ಅನಾರೋಗ್ಯದ ಕಾರಣ ರಾಕೇಶ್ ಅಕಾಲಿಕವಾಗಿ ನಿಧನರಾಗಿದ್ದು, ಈಗ ಆತ ಹೆಚ್ಚು ನೆನಪಾಗುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ತಾವು 30,000 ಮತಗಳ ಅಂತರದಿಂದ ಗೆದ್ದಿದ್ದು, ಯತೀಂದ್ರ ಅದಕ್ಕಿಂತ ಹೆಚ್ಚು ಮತಗಳ ಅಂತರದಿಂದ ಜಯಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...