alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ವಿಧಿವಶ

rakeshsid_072816-1

ಸಿಎಂ ಸಿದ್ದರಾಮಯ್ಯ ಹಿರಿಯ ಮಗ ರಾಕೇಶ್ (39) ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರಾಕೇಶ್ ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ  ಬೆಲ್ಜಿಯಂನಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ರಾಕೇಶ್ ಐಸಿಯು ವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ರಾಕೇಶ್ ಇಂದು ಕೊನೆಯುಸಿರೆಳೆದಿದ್ದಾರೆ.

ಬೆಲ್ಜಿಯಂಗೆ ಪ್ರವಾಸಕ್ಕೆ ತೆರಳಿದ್ದ ರಾಕೇಶ್ ಗೆ ಅಲ್ಲಿಯೇ ಅನಾರೋಗ್ಯ ಕಾಣಿಸಿಕೊಂಡಿತ್ತು. ಹಾಗಾಗಿ ಅವರನ್ನು ಬ್ರಿಸೆಲ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗನ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬೆಲ್ಜಿಯಂಗೆ ತೆರಳಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪೂರಕ್ಕೆ ಕರೆದೊಯ್ಯಬೇಕೆಂದು ವೈದ್ಯರು ಸಲಹೆ ನೀಡಿದ್ದರು ಎನ್ನಲಾಗಿದೆ. ಆದ್ರೆ ಸಿಂಗಾಪೂರಕ್ಕೆ ಕರೆದೊಯ್ಯುವ ಮುನ್ನವೇ ರಾಕೇಶ್ ಕೊನೆಯುಸಿರೆಳೆದಿದ್ದಾರೆ.

ರಾಕೇಶ್, ಪತ್ನಿ ಸ್ಮಿತಾ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನಗಲಿದ್ದಾರೆ. ಸೋಮವಾರ ಬೆಳಿಗ್ಗೆ ಪಾರ್ಥಿವ ಶರೀರ ಮೈಸೂರಿಗೆ ಬರುವ ಸಾಧ್ಯತೆ ಇದೆ. ಮೃತದೇಹದ ಜೊತೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಬರಲಿದ್ದಾರೆ. ಕಾಂಗ್ರೆಸ್ ಸೇರಿದಂತೆ ಎಲ್ಲ ನಾಯಕರು ರಾಕೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ರಾಕೇಶ್ ಅವರನ್ನು ಸಿಎಂ ಸಿದ್ದರಾಮಯ್ಯ ಉತ್ತರಾಧಿಕಾರಿ ಎನ್ನಲಾಗ್ತಾ ಇತ್ತು. ಸಿದ್ದರಾಮಯ್ಯ ಪ್ರೀತಿಯ ಮಗನಾಗಿದ್ದ ರಾಕೇಶ್ ಕಳೆದ ನಾಲ್ಕು ವರ್ಷಗಳಿಂದ ಫುಲ್ ಟೈಂ ರಾಜಕಾರಣ ಮಾಡ್ತಾ ಇದ್ದರು. ವರುಣಾ ಕ್ಷೇತ್ರದಿಂದ ಅವರನ್ನು ಚುನಾವಣೆಗಿಳಿಸುವ ಪ್ರಯತ್ನದಲ್ಲಿದ್ದರು ಸಿಎಂ ಸಿದ್ದರಾಮಯ್ಯ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...