alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಪುತ್ರನ ವಿರುದ್ಧ ಐ.ಟಿ.ಗೆ. ದೂರು

yateendra-s

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ ಯತೀಂದ್ರ ಅವರು ಬೇನಾಮಿ ಹೆಸರಲ್ಲಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನಿಖಾ ವಿಭಾಗಕ್ಕೆ ದೂರು ನೀಡಲಾಗಿದೆ.

ವರ್ತೂರು ಕನಕದಾಸ್ ಎಂಬುವವರು ದೂರು ನೀಡಿದ್ದು, ಯತೀಂದ್ರ ಅವರು ನಿರ್ದೇಶಕರಾಗಿದ್ದ ಮ್ಯಾಟ್ರಿಕ್ಸ್ ಇಮೇಜಿಂಗ್ ಸಲೂಷನ್ಸ್ ಕಂಪನಿಯ ವ್ಯವಹಾರ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೇ ಆಪ್ತರಾದ ರಾಜೇಶ್ ಗೌಡ, ತೇಜಸ್ವಿನಿ ಅವರ ಹೆಸರಲ್ಲಿ ಯತೀಂದ್ರ ಆಸ್ತಿ ಸಂಪಾದಿಸಿದ್ದಾರೆ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ನಂತರ ವಿವಿಧೆಡೆ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...