alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಬರುವಿಕೆಗೆ ಕಾದು ಹೈರಾಣಾದ ಅಧಿಕಾರಿಗಳು

siddaramaiah700ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಇಂದಿನಿಂದ ಪ್ರವಾಸ ಕೈಗೊಂಡಿದ್ದು, ಬೀದರ್ ವಿಮಾನ ನಿಲ್ದಾಣದ ಬಳಿ ಶಾಸಕರು, ಅಧಿಕಾರಿಗಳು ಮುಖ್ಯಮಂತ್ರಿಗಳಿಗಾಗಿ ಕಾದು ಕಾದು ಹೈರಾಣಾಗಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಸಿದ್ದರಾಮಯ್ಯನವರು ಆಗಮಿಸುವ ಕುರಿತ ಮಾಹಿತಿ ಹೊಂದಿದ್ದ ಇವರೆಲ್ಲರೂ ಅವರಿಗಾಗಿ ಕಾಯುತ್ತಿದ್ದರು. ಕೊನೆಗೆ 10-30 ಕ್ಕೆ ಸಿದ್ದರಾಮಯ್ಯನವರು ಆಗಮಿಸಿದ್ದು, ಬೀದರ್ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿನ ಬರ ಪರಿಸ್ಥಿತಿ ಪರಿಶೀಲಿಸಲು ತೆರಳಿದರು.

ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗಿದ್ದು, ಬೀದರ್, ಹುಮನಾಬಾದ್, ಬಾಲ್ಕಿ ಹಾಗೂ ಔರಾದ್ ತಾಲೂಕಿನಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಕಲಬುರಗಿ ಜಿಲ್ಲೆಯ ಬರ ಪೀಡಿತ ಪ್ರದೇಶಗಳಿಗೂ ಮುಖ್ಯಮಂತ್ರಿಗಳು ಭೇಟಿ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...