alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಪುತ್ರನಿಗೆ ಸಿಕ್ತು ಸಾಂವಿಧಾನಿಕ ಹುದ್ದೆ

cm-so-yatindra

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪುತ್ರ ಡಾ. ಯತೀಂದ್ರ ಅಧಿಕಾರವಿಲ್ಲದಿದ್ದರೂ, ಅಧಿಕಾರಿಗಳ ಸಭೆಗಳನ್ನು ನಡೆಸಿದ್ದು ಆಕ್ಷೇಪಕ್ಕೆ ಕಾರಣವಾಗಿತ್ತು.

ಈ ಹಿನ್ನಲೆಯಲ್ಲಿ ಯತೀಂದ್ರ ಅವರಿಗೆ ವಸತಿ ಯೋಜನೆ ಜಾಗೃತ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿದ್ಧರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ವಿಧಾನಸಭೆ ಕ್ಷೇತ್ರದ ವಸತಿ ಯೋಜನೆಗಳ ಜಾಗೃತ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ನೇಮಕವಾಗಿದ್ದಾರೆ.

ರಾಜ್ಯಪಾಲರ ಆಜ್ಞಾನುಸಾರ ಆದೇಶ ಹೊರಬಿದ್ದಿದ್ದು, ವಸತಿ ಇಲಾಖೆ ಅಧೀನ ಕಾರ್ಯದರ್ಶಿಗಳು ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಮೈಸೂರಿನಲ್ಲಿ ಯತೀಂದ್ರ ಅಧಿಕಾರಿಗಳ ಸಭೆ ನಡೆಸಿದ್ದು, ಅವರಿಗೆ ಯಾವ ಅಧಿಕಾರವಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನಲೆಯಲ್ಲಿ ಯತೀಂದ್ರ ಅವರಿಗೆ ಜಾಗೃತ ಸಮಿತಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...